Podi: ರಾಜ್ಯ ಸರ್ಕಾರವು ರೈತರಿಗೆ ಅನುಕೂಲ ಮಾಡಿ ಕೊಡುವ ನೆಟ್ಟಿನಲ್ಲಿ ಇನ್ನು ಮುಂದೆ ಪೋಡಿ ದುರಸ್ತಿದಕಲೆಯನ್ನು ಆನ್ಲೈನ್ ಅಲ್ಲಿ ಮಾಡಲು ನಿರ್ಧರಿಸಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರ ತಿಳಿಸಿದ್ದಾರೆ.
ಹೌದು, ಪ್ರತಿ ತಿಂಗಳು 5,000 ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಿಕೊಳ್ಳಲಾಗಿದ್ದು, ಇದನ್ನು ಆಂದೋಲನದ ರೂಪದಲ್ಲಿ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಕ್ಕಾ ದಾಖಲೆಗಳಲ್ಲದೇ ದಶಕಗಳಿಂದ ಭೂಮಿ ಉಳುಮೆ ಮಾಡುತ್ತಿರುವಂತ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿರುವ ಹಾಡಿ, ಹಟ್ಟಿ, ತಾಂಡಾಗಳಲ್ಲಿನ ನಿವಾಸಿಗಳಿಗೆ ʼ94 ಡಿʼ ಅಡಿ ಮೇ 20 ರಂದು ಒಂದು ಲಕ್ಷ ಡಿಜಿಟಲ್ ಹಕ್ಕು ಪತ್ರಗಳನ್ನು ವಿತರಿಸಲಾಗುವುದು. ಈ ವರ್ಷದ ಅಂತ್ಯದ ವೇಳೆಗೆ ಒಟ್ಟು ಎರಡು ಲಕ್ಷ ಹಕ್ಕು ಪತ್ರಗಳನ್ನು ನೀಡುವ ಗುರಿಯಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
