Rahul Gandhi: ರಾಹುಲ್ ಗಾಂಧಿ ಅವರಿಗೆ ಅಧಿಕಾರ ದೊರೆತ ದಿನವೇ ಪಾಕ್ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.
ಹೌದು, ಮಾಧ್ಯಮದವರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಅವರು ‘ರಾಹುಲ್ ಗಾಂಧಿ ಅವರ ಕೈಗೆ ಅಧಿಕಾರ ಹಾಗೂ ಭಾರತಕ್ಕಾಗಿ ನಿರ್ಧಾರಗಳನ್ನು ಕೈಗೊಳ್ಳುವ ಹಕ್ಕು ದೊರೆಯುವ ದಿನವೇ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ಅವರು ದೃಢ ನಿಶ್ಚಯ ಹೊಂದಿರುವ ವ್ಯಕ್ತಿಯಾಗಿರುವುದರಿಂದ ಇದು ಸಧ್ಯ ‘ ಎಂದು ಅವರು ಹೇಳಿದ್ದಾರೆ.
ಇನ್ನು ಪುರಸ್ಕೃತ ರಾಮಭದ್ರಾಚಾರ್ಯ ಸ್ವಾಮೀಜಿ ಅವರು, ಇತ್ತೀಚೆಗೆ ತಮ್ಮನ್ನು ಭೇಟಿಯಾದ ಸೇನೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಗೆ ದೀಕ್ಷೆ ನೀಡಿ ‘ಗುರುದಕ್ಷಿಣೆ’ ರೂಪದಲ್ಲಿ ಪಿಒಕೆ ಅನ್ನು ನೀಡುವಂತೆ ಕೇಳಿದ್ದಾರೆ.
