Home » Police: ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

Police: ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

by ಕಾವ್ಯ ವಾಣಿ
0 comments
Police Constable Recruitment

Police: ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ (Police) ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು

ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ. ಜಿ‌.ಪರಮೇಶ್ವರ ಲಿಖಿತ ಉತ್ತರ ನೀಡಿದ್ದಾರೆ.

You may also like