Home » Sumalatha Ambrish: ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ?!

Sumalatha Ambrish: ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ?!

1 comment
Sumalatha Ambrish

Sumalatha Ambrish: ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು(GT Devegowda)ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

ಹೌದು, ಸಂಸದೆ ಸುಮಲತಾ ಅಂಬರೀಶ್(Sumalatha Ambrish) ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಈ ಮೂಲಕ ದೆಹಲಿ ಮಟ್ಟದಲ್ಲಿ ಬಿಜೆಪಿ ಟಿಕೆಟ್ಗಾಗಿ ಸುಮಲತಾ ಲಾಬಿ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹೊತ್ತಲ್ಲೇ ಜಿ ಟಿ ದೇವೇಗೌಡರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

Sumalatha Ambrish

ಅಂದಹಾಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು, ಸುಮಲತಾ ಪರವಾಗಿ ಟಿಕೆಟ್ ಕೇಳಿದ ನಾರಾಯಣಗೌಡ ಇದೀಗ ಸಿದ್ದರಾಮಯ್ಯ ಮನೇಲಿ ಕೂತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ (Lok Sabha Elections) ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ರೆ, ನಾವು ಬೆಂಬಲ ನೀಡುತ್ತೇವೆ. ಆದ್ರೆ ಅವರು ಕಾಂಗ್ರೆಸ್‌ (Congress) ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

You may also like

Leave a Comment