ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆ ಮೂಲಕ ಸಮುದ್ರ ಯಾನ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.
ಈ ಮೂಲಕ ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಸಾಗಲಿರುವ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಡಾ. ಅಬ್ದುಲ್ ಕಲಾಂ ಜಲಾಂತರ್ಗಾಮಿ ನೌಕೆಯಲ್ಲಿ ಯಾನ ಕೈಗೊಂಡ ಮೊದಲ ರಾಷ್ಟ್ರಪತಿ.
ಡಿ.28 ರಂದು ಕಾರವಾರ ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3.30 ರವರೆಗೆ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ.
ಭಾನುವಾರ ಮಧ್ಯಾಹ್ನ 3.30 ರವರೆಗೆ ಹಾರವಾಡದಿಂದ ಮಾಜಾಳಿವರೆಗಿನ ಸಮುದ್ರ ತೀರದಲ್ಲಿ ಮೀನುಗಾರಿಕೆ ನಿರ್ಬಂಧ ಮಾಡಿದ್ದು, ಎಲ್ಲಾ ಮೀನುಗಾರರು ಮತ್ತು ದೋಣಿ ಮಾಲೀಕರು ಸೂಚನೆಯನ್ನು ಪಾಲಿಸುವಂತೆ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
