Home » Mizoram: ಮಿಜೋರಾಂನ ಮೊದಲನೇ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

Mizoram: ಮಿಜೋರಾಂನ ಮೊದಲನೇ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

0 comments

Mizoram: ಮಿಜೋರಾಂನ ಮೊದಲನೇ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಉದ್ಘಾಟಿಸಿದ್ದಾರೆ.

ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್ಪ್ರೆಸ್, ಸೈರಾಂಗ್-ಗುವಾಹಟಿ ಎಕ್ಸ್ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದ್ದಾರೆ.

ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ ಪ್ರದೇಶವಾಗಿದ್ದು, ಇದೀಗ ನಿಧಾನಗತಿಯಲ್ಲಿ ಸಾಗಿದ್ದ ರೈಲ್ವೆ ಕಾಮಗಾರಿ 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. 8,070 ಕೋಟಿ ರೂ. ವೆಚ್ಚದ ಬೈರಾಬಿ-ಸೈರಾಂಗ್ ರೈಲು ಮಾರ್ಗವು ನಿರ್ಮಾಣವಾಗಿದೆ. ಹೌದು, 2015ರಲ್ಲಿ ಪ್ರಾರಂಭವಾದ ಕಾಮಗಾರಿ 2025ರಲ್ಲಿ ಪೂರ್ಣಗೊಂಡಿದೆ.

ಇದೀಗ ಎಲ್ಲಾ ಸುರಂಗಗಳಲ್ಲಿ ಬ್ಯಾಲೆಸ್ಟ್ಲೆಸ್ ಟ್ರ‍್ಯಾಕ್ ಅಳವಡಿಸಲಾಗಿದೆ. ಸೇತುವೆ ಮತ್ತು ಸುರಂಗಗಳನ್ನು ಹೊರತುಪಡಿಸಿ 23.715 ಕಿ.ಮೀ ಮಾರ್ಗವು ಬಯಲು ಪ್ರದೇಶದಲ್ಲಿದೆ. ಸಾಯಿರಾಂಗ್ ಬಳಿಯ ಸೇತುವೆ ಸಂಖ್ಯೆ 144 ಕುತುಬ್ ಮಿನಾರ್‌ಗಿಂತ 114 ಮೀಟರ್ ಎತ್ತರದಲ್ಲಿದೆ. ಇದು ದೇಶದ ಅತಿ ಎತ್ತರದ ಪಿಯರ್ ರೈಲ್ವೆ ಸೇತುವೆಯಾಗಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆಯ ಅಧಿಕಾರಿ ತಿಳಿಸಿದ್ದಾರೆ.

You may also like