PM Modi: ಬಿಹಾರ ಚುನಾವಣೆಯಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಇದರ ನಡುವೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಕುರಿತು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.
ಹೌದು, ಎನ್‌ಡಿಎ ಗೆಲುವಿನ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಪ್ರಧಾನಿ ಮೋದಿಯವರು ‘ಗಂಗಾ ನದಿಯು ಬಿಹಾರದ ಮೂಲಕ ಬಂಗಾಳಕ್ಕೆ ಹರಿಯುವಂತೆ, ಬಂಗಾಳದಲ್ಲಿಯೂ ಬಿಜೆಪಿಯ ಗೆಲುವಿಗೆ ಬಿಹಾರದ ಜನಾದೇಶವು ಮಾರ್ಗವನ್ನು ನಿರ್ಮಿಸಿಕೊಟ್ಟಿದೆ ಎಂದರು.
ಅಲ್ಲದೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿಭಜನೆ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಕಾಂಗ್ರೆಸ್ ಎರಡು ಹೋಳಾಗಲಿದೆ ಕಾಂಗ್ರೆಸ್ ಪಕ್ಷದ ಜೊತೆಗೆ ಕೈಜೋಡಿಸಿದವರಿಗೆ ಇವತ್ತು ಅರಿವಾಗುತ್ತಿದೆ. ಎಲ್ಲರನ್ನೂ ಕಾಂಗ್ರೆಸ್ ಪಕ್ಷ ಜೊತೆಗೆ ಮುಳುಗಿಸುತ್ತಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಾವು ಕೆರೆಯಲ್ಲಿ ಮುಳುಗಿ ತಮ್ಮ ಜೊತೆಗೆ ಇರುವವರನ್ನು ಕೂಡ ಮತದಾನದ ಕೆರೆಯಲ್ಲಿ ಮುಳುಗಿಸಿದ್ದಾರೆ. ಹೀಗಾಗಿ ಮುಂದೆ ಕಾಂಗ್ರೆಸ್ ವಿಭಜನೆ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದು ಭವಿಷ್ಯ ನುಡಿದರು.
