Home » BIGG NEWS : ರಾಜ್ಯಕ್ಕೆ ನಾಳೆ ಪ್ರಧಾನಿ ಮೋದಿ ಆಗಮನ : ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ ನಳೀನ್‌ ಕುಮಾರ್‌ ಕಟೀಲ್

BIGG NEWS : ರಾಜ್ಯಕ್ಕೆ ನಾಳೆ ಪ್ರಧಾನಿ ಮೋದಿ ಆಗಮನ : ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ ನಳೀನ್‌ ಕುಮಾರ್‌ ಕಟೀಲ್

0 comments

ಬೆಂಗಳೂರು : ನಾಳೆ ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇದೀಗ ಸಿಎಂ ಬೊಮ್ಮಾಯಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಶಿವಾನಂದ ಸರ್ಕಲ್‌ ಬಳಿಯ ರೇಸ್ ಕೋರ್ಸ್ ರಸ್ತೆಯ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ ಕಟೀಲ್ ಪ್ರಧಾನಿ ಮೋದಿ ಮೋದಿ ಆಗಮನದ ಹಿನ್ನೆಲೆ ಕುರಿತು ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆಯ ಬಗ್ಗೆ ನಾಳೆ ಪ್ರಧಾನಿಯೊಂದಿಗಿನ ಮಾತುಕತೆಯ ಬಗ್ಗೆಯೂ ಮಾತು ಕತೆ ನಡೆಸಿದ್ದಾರೆ. ಇಂದು ನಳಿನ್‌ ಕುಮಾರ್‌ ಕಟೀಲ್‌ ಭೇಟಿಯಾಗಿದ್ದು ಅಷ್ಟೇ ಅಲ್ಲದೇ ಸಿಪಿ ಯೋಗೇಶ್ವರ್ ಕೂಡ ಸಿಎಂ ಬೊಮ್ಮಾಯಿಯನ್ನು ಭೇಟಿ ನೀಡಿ ಚರ್ಚೆ ನಡೆಸಿದ್ದರು. ಇನ್ನೂ, ಪ್ರಧಾನಿ ಮೋದಿ ರಾಜ್ಯಕ್ಕೆ ನಾಳೆ ಭೇಟಿ ನೀಡುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಪ್ರಧಾನಿ ಮೋದಿ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಈಗಾಗಲೇ ಹುಬ್ಬಳ್ಳಿಯಲ್ಲಿ ವಾಹನ ಸಂಚಾರಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಜೊತೆಗೆ ಈ ನಿಟ್ಟಿನಲ್ಲಿ ಒಂದು ದಿನ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಕೂಡಾ ಘೋಷಣೆ ಮಾಡಲಾಗಿದೆ

You may also like

Leave a Comment