Heart Attack : ಬೆಂಗಳೂರು ಹೊರವಲಯದ ದೇವನಹಳ್ಳಿ ತಾಲೂಕಿನಲ್ಲಿ KIADB ಭೂಸ್ವಾಧೀನಕ್ಕೆ ವಿರೋಧಿಸಿ ಕಳೆದ ಒಂದು ವಾರದಿಂದ ಫ್ರೀಡಂ ಪಾರ್ಕ್ನಲ್ಲಿ ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಕೂಡ ರೈತರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಫ್ರೀಡಂ ಪಾರ್ಕ್ಗೆ ಆಗಮಿಸುವಾಗ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ನಿವಾಸಿ ರೈತ ಈಶ್ವರ (50) ಮೃತ ದುರ್ದೈವಿ. ನಡೆದುಕೊಂಡು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಗುಂಡ್ಲಪೇಟೆಯಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದಿದ್ದ ರೈತ, ರೈಲು ಇಳಿದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ರಸ್ತೆಯಲ್ಲಿ ಪ್ರೀಡಂ ಪಾರ್ಕ್ಗೆ ಬರುವಾಗ ಅಸ್ವಸ್ಥನಾಗಿ ಕುಸಿದು ಬಿದಿದ್ದಾರೆ. ಕೂಡಲೇ ಪೊಲೀಸರಿಂದ ಸಿಪಿಆರ್ ಕೊಡಲು ಪ್ರಯತ್ನ ನಡೆಸಿದರಾದರು ಯಾವುದೇ ಫಲ ಕೊಡಲಿಲ್ಲ.
ಅವರನ್ನು ತಕ್ಷಣ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರಿಗೆ ರಕ್ತದೊತ್ತಡ ಮತ್ತು ಮಧುಮೇಹ,ಹೃದಯ ಸಂಬಂಧಿ ಕಾಯಿಲೆ ಕೂಡ ಇತ್ತು ಎಂದು ಹೇಳಲಾಗುತ್ತಿದೆ. ಪ್ರಾಥಮಿಕ ತನಿಖೆ ವೇಳೆ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿರೋ ಸಾಧ್ಯತೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾಟನ್ ಪೇಟೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Accident: ಕಾರಿಗೆ ಲಾರಿ ಡಿಕ್ಕಿ- ದಂಪತಿ ಸ್ಥಳದಲ್ಲೇ ಸಾವು – ಮೂವರು ಮಕ್ಕಳಿಗೆ ತೀವ್ರ ಗಾಯ
