Putturu : PUC ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ನಡೆದಿತ್ತು. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿರಲಿಲ್ಲ. ಈಗ ತನಿಖೆಯ ವೇಳೆ ಕಾರಣ ಬಹಿರಂಗವಾಗಿದೆ.
ಹೌದು, ಪುತ್ತೂರು(Putturu)ತಾಲ್ಲೂಕಿನ ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀಕ್ಷಿತಾ ಅವರು ಕಾಲೇಜಿನಿಂದ ಮನೆಗೆ ಬಂದ ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿರಲಿಲ್ಲ.
ಪ್ರಕರಣದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಆಗ ಗುರುವಾರ ಕಾಲೇಜಿಗೆ ಹೋಗಿದ್ದ ದೀಕ್ಷಿತಾ, ಸಂಜೆ ಸ್ವಲ್ಪ ತಡವಾಗಿ ಮನೆಗೆ ಬಂದಿದ್ದರು. ಈ ಕುರಿತು ಪೋಷಕರು ಪ್ರಶ್ನಿಸಿದರು ಎಂಬ ಕಾರಣಕ್ಕೆ, ಮನೆಯಲ್ಲಿ ಕೋಣೆಗೆ ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
