Home » ಪುಣಚ : ರಿಕ್ಷಾ-ಕಾರು ಅಪಘಾತ | ರಿಕ್ಷಾ ಚಾಲಕ ಮೃತ್ಯು

ಪುಣಚ : ರಿಕ್ಷಾ-ಕಾರು ಅಪಘಾತ | ರಿಕ್ಷಾ ಚಾಲಕ ಮೃತ್ಯು

by Praveen Chennavara
0 comments

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪುಣಚ ಗ್ರಾಮದ ಮಣಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪುಣಚ ಗ್ರಾಮದ ಪರಿಯಾಲ್ತಡ್ಕ ನಿವಾಸಿ ಅಶ್ರಫ್ ಎಂಬವರೇ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ನತದೃಷ್ಟ ರಿಕ್ಷಾ ಚಾಲಕ.

ಗಂಭೀರ ಗಾಯಗೊಂಡಿದ್ದ ಅಶ್ರಫ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಕಾರು ರಸ್ತೆ ಬದಿಯ ಹೊಂಡಕ್ಕೆ ಉರುಳಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

You may also like

Leave a Comment