2
ಹಾಡಹಗಲೇ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವೊಂದನ್ನು ಹಿಂ.ಜಾ.ವೇ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆಯೊಂದು ವರದಿಯಾಗಿದೆ.

ಗೋ ಸಾಗಾಟದ ಬಗ್ಗೆ ಹಿಂ.ಜಾ.ವೇ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಕ್ಯೆಪದವು ಸಮೀಪದ ಉಳಿ ಎಂಬಲ್ಲಿ ವಾಹನವೊಂದನ್ನು ತಡೆದಾಗ ಅಕ್ರಮ ಗೋ ಸಾಗಾಟ ಬೆಳಕಿಗೆ ಬಂದಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಾಹನ ಸಹಿತ ರಫೀಕ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
