3
Puttur: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
Channapattana By Election: ಸಿ ಪಿ ಯೋಗೇಶ್ವರ್ ಪಕ್ಷೇತರ ಸ್ಪರ್ಧೆ ?!
ವಿಶ್ವನಾಥ್ ಅಲಿಯಾಸ್ ವೇಣು (32) ಎಂಬುವವರೇ ಮೃತ ಯುವಕ.
ಇವರು ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಮನೆಯೊಳಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
