Home » Puttur: ಟ್ರಾಫಿಕ್‌ ಪೊಲೀಸರಿಂದ ಆಕ್ರಮಣಕಾರಿ ವರ್ತನೆ: ಸೂಕ್ತ ಕ್ರಮದ ಭರವಸೆ

Puttur: ಟ್ರಾಫಿಕ್‌ ಪೊಲೀಸರಿಂದ ಆಕ್ರಮಣಕಾರಿ ವರ್ತನೆ: ಸೂಕ್ತ ಕ್ರಮದ ಭರವಸೆ

0 comments

Puttur: ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಿಲ್ಲ ಎನ್ನುವ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದನೆ ಮಾಡಿದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಕುರಿತು ನಿನ್ನೆ ಮಾಧ್ಯಮಗಳು ವರದಿ ಮಾಡಿತ್ತು.

ದೃಶ್ಯಾವಳಿಯಲ್ಲಿ ಪುತ್ತೂರು ಟ್ರಾಫಿಕ್‌ ಪೊಲೀಸ್‌ ಠಾಣೆಯ ಇಬ್ಬರು ಸಿಬ್ಬಂದಿ ಆಟೋ ರಿಕ್ಷಾವನ್ನು ಬೆನ್ನಟ್ಟಿ ಬಂದು, ರಿಕ್ಷಾದ ಕೀ ಕಿತ್ತುಕೊಳ್ಳಲು ಪ್ರಯತ್ನ ಮಾಡುವುದು, ಪೊಲೀಸರ ವಿಡಿಯೋ ಮಾಡುತ್ತೀಯಾ ಎಂದು ಪ್ರಶ್ನೆ ಮಾಡುವುದು, ಆತನ ಅಂಗಿಯನ್ನು ಹಿಡಿದೆಳೆಯುವುದು, ಅವಾಚ್ಯ ಪದಗಳಿಂದ ನಿಂದಿಸುವುದು, ಮೈ ಮೇಲೆ ಕೈ ಮಾಡುವುದು ಕಂಡು ಬಂದಿದೆ.

ಈ ಪ್ರಕರಣದ ವೀಡಿಯೋ ವೈರಲ್‌ ಆಗಿದ್ದು, ಇದನ್ನು ವೀಕ್ಷಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಸ್ಪಷ್ಟನೆ ನೀಡಿದೆ ಎಂದು ವರದಿಯಾಗಿದೆ. ಈ ವಿಡಿಯೋದಲ್ಲಿ ಇಬ್ಬರು ಪೊಲೀಸರ ಕೃತ್ಯ ತಪ್ಪು ಎಂದು ಸ್ಪಷ್ಟವಾಗಿ ತೋರುತ್ತಿದ್ದು, ಇದನ್ನು ಪರಿಶೀಲಿಸಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

 

You may also like