Home » Puttur: ಪುತ್ತೂರಿನಲ್ಲಿ ಕೃಷಿ ಮೇಳ: ಸಸ್ಯಜಾತ್ರೆ ಉದ್ಘಾಟಿಸಿದ ಕೃಷಿ ಸಚಿವ ಚೆಲುವರಾಯ ಸ್ವಾಮಿ

Puttur: ಪುತ್ತೂರಿನಲ್ಲಿ ಕೃಷಿ ಮೇಳ: ಸಸ್ಯಜಾತ್ರೆ ಉದ್ಘಾಟಿಸಿದ ಕೃಷಿ ಸಚಿವ ಚೆಲುವರಾಯ ಸ್ವಾಮಿ

0 comments

Puttur: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಇವರ ಸಾರಥ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಸುದ್ದಿ ಅರಿವು ಕೇಂದ್ರ, ರೈತ ಕುಡ್ಲ ಪ್ರತಿಷ್ಠಾನ ಸಹಯೋಗದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಶನಿವಾರ ಆರಂಭಗೊಂಡ 3 ದಿನಗಳ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ- ಸಸ್ಯಮೇಳವನ್ನು ಉದ್ಘಾಟಿಸಿ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ಮಾತನಾಡಿದರು.

ಕರ್ನಾಟಕದ ಕೃಷಿ ಈಗ ಜಗತ್ತಿನ ಗಮನ ಸೆಳೆದಿದ್ದು, ದೇಶದಲ್ಲೇ ನಂಬರ್ ವನ್ ಕೃಷಿ ಎಂಬ ಪುರಸ್ಕಾರವನ್ನು ಕೇಂದ್ರದಿಂದ ಪಡೆದುಕೊಂಡಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು.ನಮ್ಮ ಸರಕಾರ ಗೊಬ್ಬರ, ಬಿತ್ತನೆ ಬೀಜ ಸಮಸ್ಯೆಗಳನ್ನು ಕೇಂದ್ರದ ಅಸಹಕಾರದ ನಡುವೆಯೂ ನಿವಾರಿಸಿದೆ. ಕೆಲವೇ ತಾಲೂಕುಗಳಲ್ಲಿದ್ದ ಕೃಷಿ ಭಾಗ್ಯ ಯೋಜನೆಯನ್ನು ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಿಸಿದೆ. ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯ ಪರಿಹಾರ ಮೊತ್ತ ಪಾವತಿಯಲ್ಲಿ ಆಗಿರುವ ಸಮಸ್ಯೆ ನಿವಾರಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಗ್ರಾಮೀಣ ಭಾಗದಲ್ಲಿ ಅಳವಡಿಸಲಾದ ಮಳೆ ಮಾಪಕ, ಹವಾಮಾನ ಮಾಪಕಗಳ ಅವೈಜ್ಞಾನಿಕತೆಯನ್ನು ಮಳೆಗಾಲ ಆರಂಭಕ್ಕೆ ಮುನ್ನ ಸರಿಪಡಿಸಲಾಗುವುದು ಎಂದರು.

 

 

You may also like