Home » Puttur: ಆರ್ಯಾಪು: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

Puttur: ಆರ್ಯಾಪು: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

0 comments

Puttur: ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ ಗೋಪಾಲ ನಾಯ್ಕ(55ವ) ರವರು ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ಮಲಗಿದ್ದ ಅವರು ಬೆಳಗ್ಗೆ ಮನೆ ಮಂದಿ ನೋಡುವಾಗ ಮನೆಯ ಎದುರಿನ ಜಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ತೂರು ಬಸ್‌ ನಿಲ್ದಾಣದ ಬಳಿಯ ಕ್ಯೂನಲ್ಲಿ ಬಾಡಿಗೆ ಮಾಡುತ್ತಿದ್ದ ಅವರು ಪುತ್ತೂರು ಸಹಕಾರಿ ಸಂಘವೊಂದರಲ್ಲಿ ಆಟೋ ರಿಕ್ಷಾದ ಸಾಲದ ಕಂತು ಮತ್ತು ಆಟೋ ರಿಕ್ಷಾದ ಇನ್‌ಶೂರೆನ್ಸ್ ಪಾವತಿಗೆ ಬಾಕಿಯಾಗಿದ್ದ ಹಿನ್ನಲೆಯಲ್ಲಿ ರಿಕ್ಷಾವನ್ನು ಸೀಸ್ ಮಾಡಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

You may also like