Home » ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ವಾಹನ ಪಾರ್ಕಿಂಗ್‌ಗೆ ಹಿಂದೂ ಭಕ್ತರಿಗೆ ಮಾತ್ರ ಅವಕಾಶ | ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ವಾಹನ ಪಾರ್ಕಿಂಗ್‌ಗೆ ಹಿಂದೂ ಭಕ್ತರಿಗೆ ಮಾತ್ರ ಅವಕಾಶ | ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ

by Praveen Chennavara
0 comments

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು , ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಪ್ರಕಟಣೆ ತಿಳಿಸಿದೆ.

ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಪ್ರಕಟಣೆ ಹೊರಡಿಸಿದ್ದು, ದೇವಾಲಯ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂಧೂ ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಹಿಂದೂ ಭಕ್ತಾಧಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

You may also like

Leave a Comment