Home » Puttur: ಪುತ್ತೂರು: ದ್ವೇಷ ಭಾಷಣ ಆರೋಪ: ಕಾರ್ಯಕ್ರಮ ಸಂಘಟಕರಿಗೆ ನಿರೀಕ್ಷಣಾ ಜಾಮೀನು

Puttur: ಪುತ್ತೂರು: ದ್ವೇಷ ಭಾಷಣ ಆರೋಪ: ಕಾರ್ಯಕ್ರಮ ಸಂಘಟಕರಿಗೆ ನಿರೀಕ್ಷಣಾ ಜಾಮೀನು

0 comments
Uttarpradesh

Puttur: ಉಪ್ಪಳಿಗೆಯಲ್ಲಿ ಆ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಕ್ರಮ ಸಂಘಟಕರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ರವರು ದ್ವೇಷದ ಮತ್ತು ಮಹಿಳೆಯರ ವಿರುದ್ಧ ಅವಮಾನಕಾರಿಯಾದ ಭಾಷಣ ಮಾಡಿದ್ದರೆಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಡಾ. ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಬಿಎನ್‌ಎಸ್ 79, 196, 299, 302 ಹಾಗು 3(5) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಡಾ. ಪ್ರಭಾಕರ ಭಟ್ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ್ದು, ಇದನ್ನು ವಿಸ್ತರಣೆ ಮಾಡಬೇಕು ಎಂದು ಅರ್ಜಿದಾರರ ಪರ ವಕೀಲ ಮಹೇಶ್ ಕಜೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂತಿಮ ವಿಲೇವಾರಿ ತನಕ ಮಧ್ಯಂತರ ಜಾಮೀನು ವಿಸ್ತರಿಸಿ ಸರಕಾರಿ ಅಭಿಯೋಜಕರು ಮತ್ತು ದೂರುದಾರರ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ. 

You may also like