Home » Puttur: ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆ

Puttur: ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆ

0 comments

Puttur: ಚಿಕ್ಕಪುತ್ತೂರು ನಿವಾಸಿ ಚಿಂತನ್‌ ಎಂಬುವವರ ಪತ್ನಿ 7 ತಿಂಗಳ ಗರ್ಭಿಣಿ ರೇಷ್ಮಾ ಜೂ.15 ರ ರಾತ್ರಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ಪುತ್ತೂರು ಕಸಬಾದ ಚಿಕ್ಕಪುತ್ತೂರಿನಲ್ಲಿ ಚಿಂತನ್‌ ತಮ್ಮ ಪತ್ನಿ ಹಾಗೂ ಪುತ್ರಿ ಜೊತೆ ಬಾಡಿಗೆ ಮನೆಯಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಚಿಂತನ್‌ ಅವರ ಮದುವೆ ಸುರತ್ಕಲ್‌ನ ರೇಷ್ಮಾ ಜೊತೆ ನಡೆದಿತ್ತು.

ಪುತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ತನಿಖೆ ಮೂಲಕ ಕಾರಣ ತಿಳಿದು ಬರಬೇಕಿದೆ.

You may also like