Home » Puttur: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಂದೇಶ ಪ್ರಸಾರ: ಕೇಸು ದಾಖಲು

Puttur: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಂದೇಶ ಪ್ರಸಾರ: ಕೇಸು ದಾಖಲು

0 comments
Facebook and Instagram users

Puttur: ಪುತ್ತೂರು: ಪತ್ರಿಕಾ ಪ್ರಕಟಣೆ:

ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಕೋಮುಸೌಹಾರ್ದತೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣವಾದ ಫೇಸ್ಟುಕ್ ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಸದ್ರಿ ಫೇಸ್ಸುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದು ದಿನಾಂಕ: 04-08-2025 ರಂದು ಕಂಡುಬಂದಿರುತ್ತದೆ.

ಸದ್ರಿ ಫೇಸ್ಬುಕ್‌ ಸಂದೇಶದಿಂದ ವಿಭಿನ್ನ ಕೋಮುಗಳ ನಡುವೆ ದ್ವೇಷ ಮೂಡಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯಾಗುವ ಸಾದ್ಯತೆ ಇರುವುದರಿಂದ, ಈ ಫೇಸ್ಟುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, 00: 196(1) (a) 353(2)BNS 2023 3 ನಡೆಸಲಾಗುತ್ತಿದೆ.

You may also like