25
ಬೆಂಗಳೂರು: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಲಿದ್ದಾರೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡಲೂರಿನ ಸೇಂಟ್ ಥಾಮಸ್ ಆಂಗ್ಲ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಧ್ಯಾಹ್ನ 1.15 ಗಂಟೆಗೆ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭಾಗಿಯಾಗಲಿದ್ದಾರೆ.
ಈ ವೇಳೆ ಒಟ್ಟಾಗಿ ಡಿಕೆಶಿ, ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
