ಬೆಂಗಳೂರು: ರೈಲ್ವೆ ಇಲಾಖೆಯ ಬಡ್ತಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸೋಮಣ್ಣ ಈ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹೊರಡಿಸಿರುವ ಅಧಿಸೂಚನೆ ಹೊರತುಪಡಿಸಿ ಕನ್ನಡವನ್ನೂ ಸೇರಿಸಿ ಮರು ಅಧಿಸೂಚನೆ ಹೊರಡಿಸಬೇಕು ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಸೂಚಿಸಿದ್ದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಪರೀಕ್ಷೆ ಬರೆಯಲು ಇಂಗ್ಲಿಷ್ ಅಥವಾ ಹಿಂದಿ ಅಥವಾ ಕನ್ನಡ ಭಾಷೆ ಯನ್ನು ಆಯ್ಕೆ ಮಾಡಲು ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳು ಅವಕಾಶ ನೀಡಿವೆ. ಆದರೆ, ಬೆಂಗಳೂರು ವಿಭಾಗದ ಅಧಿಸೂಚನೆಯಲ್ಲಿ ಇಂಗ್ಲಿಷ್ ಇಲ್ಲವೇ ಹಿಂದಿಯಲ್ಲಿ ಮಾತ್ರ ಉತ್ತರಿಸಬೇಕು ಎಂದು ಸೂಚಿಸಲಾಗಿತ್ತು.
ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ 317 ಹುದ್ದೆಗಳಿಗೆ, ಹುಬ್ಬಳ್ಳಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ 101 ಹಾಗೂ ಮೈಸೂರು ವಿಭಾಗದಲ್ಲಿ 56 ಹುದ್ದೆಗಳಿಗೆ ಡಿ.11 ರಂದು ಆಯಾ ವಿಭಾಗೀಯ ಮಟ್ಟದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಟ್ರೈನ್ ಕ್ಲರ್ಕ್, ಶಂಟಿಂಗ್ ಮಾಸ್ಟರ್, ಪಾಯಿಂಟ್ಸ್ ಮನ್, ಟಿಕೆಟ್ ತಪಾಸಣಾಕಾರರು, ವಾಣಿಜ್ಯ ಸಹಾಯಕ ಹುದ್ದೆಗಳಲ್ಲಿರು ವವರು, 3 ವರ್ಷ ಸೇವಾವಧಿ ಪೂರೈಸಿ ದವರು ಈ ವ್ಯವಸ್ಥಾಪಕ ಹುದ್ದೆ ಪರೀಕ್ಷೆಗೆ “ ಅರ್ಜಿ ಹಾಕಬಹುದಾಗಿದೆ. ಪರೀಕ್ಷೆ ದಿನಾಂಕ ಇನ್ನೂ ನಿಗದಿಯಾಗಬೇಕಿದೆ
