Home » Rain: ಅನಂತಾಡಿ: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ; ಚಾಲಕನಿಗೆ ಗಾಯ

Rain: ಅನಂತಾಡಿ: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ; ಚಾಲಕನಿಗೆ ಗಾಯ

0 comments

Rain: ಅನಂತಾಡಿ: ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಅನಾಹುತ ಸಂಭವಿಸಿದೆ. ಅನಂತಾಡಿಯ ಗೋಳಿಕಟ್ಟೆ ಎಂಬಲ್ಲಿ ಬಿರುಸಿನ ಗಾಳಿ ಮತ್ತು ಮಳೆಗೆ ಬೃಹತ್‌ ಮರವೊಂದು ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಉರುಳಿಬಿದ್ದಿರುವ ಘಟನೆ ನಡೆದಿದೆ.

ಈ ಘಟನೆಯಲ್ಲಿ ಆಟೋ ಚಾಲಕ ಪ್ರಕಾಶ್‌ ಎಂಬುವವರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಮರ ಬಿದ್ದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.

ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

You may also like