Home » Karnataka Rain: ರಾಜ್ಯದಲ್ಲಿ ಮೂರು ದಿನ ವರುಣಾರ್ಭಟ ಸಾಧ್ಯತೆ

Karnataka Rain: ರಾಜ್ಯದಲ್ಲಿ ಮೂರು ದಿನ ವರುಣಾರ್ಭಟ ಸಾಧ್ಯತೆ

0 comments

Karnataka Rain: ಕರಾವಳಿ ಭಾಗ ಸೇರಿ ರಾಜ್ಯದ ಕೆಲವು ಕಡೆಗಳಲ್ಲಿ ತಾಪಮಾನದ ಏರಿಕೆ ಉಂಟಾಗಿದೆ. ಇದರ ನಡುವೆ ಹವಾಮಾನ ಇಲಾಖೆಯು ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಭಾಗ, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಮಾ.12 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಹಗಲು ಮಳೆಯಾಗುವ ಎಲ್ಲಾ ಸಾಧ್ಯತೆಯಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರ ಜೊತೆಗೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡಾ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

You may also like