Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ತೀವ್ರತೆ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆ ಕಡಿಮೆಯಾಗಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದನ್ನೂ ಓದಿ:Railways: ಭಾರತದಲ್ಲಿ ಒಂದೇ ಒಂದು ರೈಲು ಓಡದ ಏಕೈಕ ರಾಜ್ಯ ಯಾವುದು? ಇಲ್ಲಿಗೆ ರೈಲ್ವೇ ಅಗತ್ಯ ಇಲ್ಲವೇ?
11 ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ, ಪಟ್ಟಿ ಬಿಡುಗಡೆ
ಭಾರತ ಹವಾಮಾನ ಇಲಾಖೆ (IMD) ಗುರುವಾರ (ಸೆಪ್ಟೆಂಬರ್ 18) 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. IMDಯ ಇತ್ತೀಚಿನ ಬುಲೆಟಿನ್ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ಬಿಹಾರ, ಉತ್ತರ ಪ್ರದೇಶ, ಕೇರಳ, ಪುದುಚೇರಿ, ಗೋವಾ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ತಮಿಳುನಾಡಿನಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.
