Home » ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ | ಕಾಲು ಮುರಿತ

ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ | ಕಾಲು ಮುರಿತ

0 comments

ರಾಮನಗರದಲ್ಲಿ (Ramanagar)ವಿದ್ಯಾರ್ಥಿನಿಯೊಬ್ಬಳು ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಸಂದರ್ಭ (Student) ಆಕೆಯ ಕಾಲಿನ ಮೇಲೆ ಬಸ್ ಚಕ್ರ ಹರಿದು (Bus Accident), ವಿದ್ಯಾರ್ಥಿನಿಯ ಕಾಲು ಮುರಿದಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ವಿದ್ಯಾ ಬಿಡದಿಯ ಜ್ಞಾನವಿಕಾಸ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಬಿಡದಿಯ ಭೈರಮಂಗಲ ಕ್ರಾಸ್‌ನಲ್ಲಿ ವಿದ್ಯಾರ್ಥಿನಿ ವಿದ್ಯಾ (19) ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದಾಗ ಈ ದುರ್ಘಟನೆ ನಡೆದಿದೆ.


ಈ ಅಪಘಾತ ನಡೆದ ತಕ್ಷಣವೆ ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ (Hospital) ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ . ಈ ಪ್ರಕರಣದ ಕುರಿತಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ (Bidadi Police Station) ಪ್ರಕರಣ ದಾಖಲಾಗಿದೆ.

You may also like

Leave a Comment