ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇವೆಲ್ಲವೂ ಒಂದು ವರ್ಷದ ಹಿಂದೆ ಸೆರೆಯಾದ ದೃಶ್ಯಗಳು. ಸದ್ಯಕ್ಕೆ ಡಿಸಿಆರ್‌ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಪೊಲೀಸ್ ಯೂನಿಫಾರಂನಲ್ಲಿಯೇ ಕಚೇರಿಯಲ್ಲಿ ಕುಳಿತು ಮುತ್ತು ಕೊಡುವ, ಎದೆಗೆ ಚುಂಬಿಸುವ, ಲಿಪ್‌ಲಾಕ್ ಮಾಡುವ ದೃಶ್ಯಗಳು ವೈರಲ್ ಆಗಿದೆ. ರನ್ಯಾ ರಾವ್ ಪ್ರಕರಣಕ್ಕಿಂತ ಮೊದಲು ನಡೆದ ಘಟನೆ ಇದಾಗಿದೆ ಎಂದು ವರದಿಯಾಗಿದೆ. ಅತ್ತ ಕಡೆ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆಯಲ್ಲಿ ಸಿಕ್ಕಿಬಿದ್ದಿದ್ದರೆ, ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿದೆ.
ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ವಿಚಾರ ಸಂಬಂಧ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆಗ್ರಹ ಮಾಡಿದ್ದಾರೆ.



