ಕೇಂದ್ರ ಸರ್ಕಾರ ಜನ ಸಾಮಾನ್ಯರಿಗಾಗಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಿದೆ. ಕೊರೊನಾದಿಂದ ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಪಡಿತರವನ್ನು ಸಹ ನೀಡಲಾಗಿದೆ. ಇನ್ನು ಸಧ್ಯ ಪಡಿತರ ಚೀಟಿದಾರರಿಗೆ ಕೇಂದ್ರ ಮತ್ತೊಂದು ಸಿಹಿ ಸುದ್ದಿ ನೀಡಿದೆ.
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದಂತೆ ಇನ್ಮುಂದೆ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಹಾಗೂ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಲಾಗುವುದು. ಇನ್ನು ಈ ಬಗ್ಗೆ ಸರ್ಕಾರ ಪ್ರಚಾರವನ್ನೂ ನಡೆಸುತ್ತಿದೆ. ಅದರಂತೆ ಸದ್ಯ ಎಲ್ಲಾ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಗಾಗಿ ಆಯುಷ್ಮಾನ್ ಕಾರ್ಡ್ ನೀಡಲು ಕೇಂದ್ರ ನಿರ್ಧರಿಸಿದೆ.
ಸರ್ಕಾರ ಹಲವು ಕೇಂದ್ರಗಳಲ್ಲಿ ಈ ಸೌಲಭ್ಯ ಕಲ್ಪಿಸುತ್ತಿದೆ. ಇದರಲ್ಲಿ ಪಡಿತರ ಚೀಟಿ ತೋರಿಸಿ ಜನ್ ಸುವಿಧಾ ಕೇಂದ್ರದಲ್ಲಿ ಆಯುಷ್ಮಾನ್ ಕಾರ್ಡ್’ಗೆ ಅರ್ಜಿ ಸಲ್ಲಿಸಬಹುದು. ಸರ್ಕಾರ ಪಡಿತರ ಚೀಟಿದಾರರ ಪಟ್ಟಿಯನ್ನ ನೋಡಿ ಆಯುಷ್ಮಾನ್ ಭಾರತ್ ಕಾರ್ಡ್ ಮಾಡುತ್ತಿದೆ.
ಅಂದ್ಹಾಗೆ, ಸೆಪ್ಟೆಂಬರ್‌ನಲ್ಲಿಯೂ ಸರ್ಕಾರ ಉಚಿತ ಪಡಿತರ ನೀಡುತ್ತಿದೆ. ಈಗ ದೇಶಾದ್ಯಂತ ಆಯುಷ್ಮಾನ್ ಕಾರ್ಡ್‌ಗಳನ್ನು ಒದಗಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
