New Ration Card: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಬರುತ್ತಿದ್ದಂತೆ ಬಿಪಿಎಲ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್ ಕಾರ್ಡ್ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್ ಕಾರ್ಡ್ಗೆ (New Ration Card) ಅರ್ಜಿ ಸಲ್ಲಿಕೆ ಮಾಡಲು ಕಾದುಕುಳಿತಿದ್ದಾರೆ.
ಆದರೆ, ಈಗಾಗಲೇ ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಮಾರು 2.95 ಲಕ್ಷ ಅರ್ಜಿಗಳ ಪರಿಶೀಲನೆ ಆಗಬೇಕಿದೆ. ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಹಲವರು ಕಾರ್ಡ್ ಗಳನ್ನು ಸರ್ಕಾರ ಯಾವಾಗ ಕೊಡುತ್ತೆ ಅಂತ ಪ್ರಶ್ನೆ ಮಾಡ್ತಿದ್ದಾರೆ.
ಇದರ ನಡುವೆ ಆಹಾರ ಇಲಾಖೆ ಕಳೆದ ಒಂದು ತಿಂಗಳಿನಿಂದ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಹೊಸ ರೇಷನ್ ಕಾರ್ಡ್, ಈಗಾಗಲೇ ಇರುವ ರೇಷನ್ ಕಾರ್ಡ್ ತಿದ್ದುಪಡಿ, ರೇಷನ್ ಕಾರ್ಡ್ ಅಪ್ಡೇಟ್, ಡಿಲೀಟ್ ಸೇರಿದಂತೆ ಇತರೇ ಆಯ್ಕೆಗಳನ್ನು ತಡೆ ಹಿಡಿದಿದೆ. ಆದರೆ ಸರ್ಕಾರ ಸೂಚನೆ ಮೇರೆಗೆ ಆಹಾರ ಇಲಾಖೆ ಆಪ್ಡೇಟ್ಗಳಿಗೆ ತಡೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸರ್ಕಾರಕ್ಕೆ ಆಹಾರ ಇಲಾಖೆ ಕೂಡ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ. ಈ ಬಗ್ಗೆ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಕುಮಾರ್ ಅವರು ಅರ್ಜಿಗಳ ಪರಿಶೀಲನೆ ಮಾಡುತ್ತೇವೆ ಎಂದು ಖಚಿತ ಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಆಹಾರ ಕಾಯ್ದೆ ಅಡಿ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಬಿಪಿಎಲ್ ಕಾರ್ಡ್ದಾರರು ಇದ್ದು, 4 ಕೋಟಿ 42 ಲಕ್ಷದಷ್ಟು ಫಲಾನುಭವಿಗಳು ಇದ್ದಾರೆ. ಹೊಸದಾಗಿ ಕಾರ್ಡ್ ಕೊಡಬೇಕು ಎಂದರೇ ಹಣಕಾಸು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕಿದೆ. ಆದ್ದರಿಂದ ಸರ್ಕಾರ ಹೊಸ ಅರ್ಜಿಗಳ ಸ್ವೀಕಾರಕ್ಕೆ ತಡ ಮಾಡುತ್ತಿದೆ ಎನ್ನಲಾಗಿದೆ. ಈ ಎಲ್ಲಾ ಅಂಶಗಳನ್ನು ನೋಡಿದರೆ ಹೊಸ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಸಿಗುವುದು ತಡವಾಗುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರ ಈಗ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸಲು ಶ್ರಮಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೇಷನ್ ಕಾರ್ಡ್ಗಳು ಹೆಚ್ಚಾದರೆ ಗ್ಯಾರಂಟಿ ಯೋಜನೆಗಳ ವೆಚ್ಚಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರೇಷನ್ ಕಾರ್ಡ್ಗಳು ಹೆಚ್ಚಾದರೆ ಗ್ಯಾರಂಟಿ ಯೋಜನೆಗಳ ವೆಚ್ಚಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಸಾವಿರಾರರು ಕೋಟಿ ಅನುದಾನ ನೀಡಿರುವ ಸರ್ಕಾರಕ್ಕೆ ಹೆಚ್ಚುವರಿಯಾಗಿ ಸುಮಾರು 650 ಕೋಟಿ ತಿಂಗಳಿಗೆ ನೀಡುವುದು ಅಸಾಧ್ಯವಲ್ಲ. ಆದರೆ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಆರಂಭ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರ ಪಡೆದುಕೊಳ್ಳಲು ಜನರು ಇನ್ನು ಒಂದು ತಿಂಗಳು ಕಾದು ನೋಡಬೇಕಿದೆ.
ಇದನ್ನೂ ಓದಿ: ಮದ್ಯ ಪ್ರಿಯರ ಬೇಡಿಕೆಗೆ ಕೊನೆಗೂ ಐಸಿನಂತೆ ಕರಗಿದ ಸರ್ಕಾರ, ಮದ್ಯ ಇನ್ನು ಅಗ್ಗ !
