Home » Karnataka Rains: ರಾಜ್ಯದ ಹಲವೆಡೆ ರೆಡ್ ಅಲರ್ಟ್, ಉಡುಪಿ ಸೇರಿ ಹಲವೆಡೆ ಆರೆಂಜ್, ದಕ್ಷಿಣ ಕನ್ನಡ, ಕೆಲವೆಡೆ ಯಲ್ಲೋ !

Karnataka Rains: ರಾಜ್ಯದ ಹಲವೆಡೆ ರೆಡ್ ಅಲರ್ಟ್, ಉಡುಪಿ ಸೇರಿ ಹಲವೆಡೆ ಆರೆಂಜ್, ದಕ್ಷಿಣ ಕನ್ನಡ, ಕೆಲವೆಡೆ ಯಲ್ಲೋ !

0 comments
karnataka Rains

Karnataka Rains: ರಾಜ್ಯದ ವಿವಿಧೆಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗೆ ಸೋಮವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ ಪಿ ನಡ್ಡಾ ರಾಜೀನಾಮೆ !!ಇವರೆನಾ ಮುಂದಿನ ಅಧ್ಯಕ್ಷರು ?

ಅದಲ್ಲದೆ ಉಡುಪಿ ಸೇರಿದಂತೆ ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕೂಡಾ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಯಚೂರು, ದಾವಣಗೆರೆ, ಚಿಕ್ಕಮಗಳೂರಿಗೆ ‘ಯೆಲ್ಲೊ ಅಲರ್ಟ್’ ಘೋಷನೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆ, ಜತೆಗೆ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅದೇ ಕರಾವಳಿಯಲ್ಲಿ ಗಾಳಿಯ ವೇಗವು 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಉಳಿದಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಮಂಗಳವಾರವು ಕೂಡಾ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ನೀಡಲಾಗಿದೆ. ಕೊಪ್ಪಳ,ಹಾವೇರಿ ಹಾಗೂ ಗದಗಕ್ಕೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಅಲ್ಲದೆ ಜೂನ್ 14 ರವರೆಗೂ ರಾಜ್ಯದ ವಿವಿಧೆಡೆ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ತುಳಸಿಗೆ ಈ ವಿಧಿ – ವಿಧಾನಗಳಲ್ಲಿ ನೀರನ್ನು ಅರ್ಪಣೆ ಮಾಡಿ! ಲಕ್ಷೀ ನಿಮ್ಮ ಪಾಲಾಗುತ್ತಾಳೆ!

You may also like

Leave a Comment