Home » Bangalore: “ಕಾಡೊಳಗಿನ ಜನವಸತಿ ಸ್ಥಳಾಂತರಿಸಲು ಪರಿಶೀಲನೆ”: ಸಚಿವ ಈಶ್ವರ ಖಂಡ್ರೆ

Bangalore: “ಕಾಡೊಳಗಿನ ಜನವಸತಿ ಸ್ಥಳಾಂತರಿಸಲು ಪರಿಶೀಲನೆ”: ಸಚಿವ ಈಶ್ವರ ಖಂಡ್ರೆ

0 comments

Bangalore: ‘ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ಕುದುರೆಮುಖ ರಾಷ್ಟ್ರೀಯ ಉದ್ಯಾನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ವಸತಿ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ 2005ರ ಸುತ್ತೋಲೆಯನ್ನು ಪುನರ್‌ ಪರಿಶೀಲಿಸುವಂತೆ ಕೋರಿ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.‘ಅರಣ್ಯದೊಳಗಿರುವ ಜನವಸತಿಗಳ ಸ್ಥಳಾಂತರದಿಂದ ಅರಣ್ಯವಾಸಿಗಳು ಮತ್ತು ಅವರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ. ಅಲ್ಲದೇ, ಮಾನವ–ವನ್ಯಜೀವಿ ಸಂಘರ್ಷವೂ ಕಡಿಮೆ ಆಗುತ್ತದೆ. ಸ್ಥಳಾಂತರಕ್ಕೆ ಪರಿಹಾರ ನೀಡಬೇಕಾಗುತ್ತದೆ. ಇದನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ– ಹಂತವಾಗಿ ಮಾಡಬೇಕಾಗುತ್ತದೆ. ಬಜೆಟ್‌ನಲ್ಲಿ ಇದಕ್ಕೆ ಹಣ ಮೀಸಲಿಟ್ಟರೆ ಸಾಧ್ಯವಾಗುತ್ತದೆ. ಈ ಕುರಿತು ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ’ ಎಂದು ಖಂಡ್ರೆ ಹೇಳಿದರು.ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದೆ. ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

You may also like