Home » Mangalore: ಮುಂಡಾಜೆಯಲ್ಲಿ ರಿಕ್ಷಾ-ಪಿಕಪ್‌ ಡಿಕ್ಕಿ-ಇಬ್ಬರಿಗೆ ಗಾಯ

Mangalore: ಮುಂಡಾಜೆಯಲ್ಲಿ ರಿಕ್ಷಾ-ಪಿಕಪ್‌ ಡಿಕ್ಕಿ-ಇಬ್ಬರಿಗೆ ಗಾಯ

0 comments

Mangalore: ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಕಲ್ಮಂಜ-ಧರ್ಮಸ್ಥಳ ರಸ್ತೆಯ ಕೆದಿಹಿತ್ಲು ಎಂಬಲ್ಲಿ ಮೇ 22 ರಂದು ಸಂಜೆ ರಿಕ್ಷಾ-ಪಿಕಪ್‌ ಮಧ್ಯೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ.

ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ (42) ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಿಕಪ್‌ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬುವವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like