Rikki Rai: ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ನಡೆದ ಪ್ರಕರಣ ಇಡೀ ರಾಜ್ಯದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ಕುರಿತು ಇದೀಗ ತನಿಖೆ ನಡೆಯುತ್ತಿದ್ದು, ವಿಚಾರಣೆ ವೇಳೆ ಗನ್ ಮ್ಯಾನ್ ಸ್ಪೋಟಕ ಸತ್ಯವೊಂದನ್ನು ಬಾಯಿಬಿಟ್ಟಿದ್ದಾನೆ.
ಹೌದು, ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಶುಕ್ರವಾರ ರಾತ್ರಿ (ಏಪ್ರಿಲ್ 18) ರಾಮನಗರದ ಬಿಡದಿ ಬಳಿ ಫೈರಿಂಗ್ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಿಕ್ಕಿ ಮೂಗು ಹಾಗೂ ಕೈಗಳಿಗೆ ಗಾಯಗಳಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇತ್ತ ವಿಚಾರಣೆಯನ್ನು ಕೈಗೆತ್ತಿಕೊಂಡ ಪೊಲೀಸರು ಗನ್ ಮ್ಯಾನ್ ವಿಠ್ಠಲ್ ನನ್ನು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ವೇಳೆ ಪೊಲೀಸರು ಗನ್ ಮ್ಯಾನ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕವಾದ ಹೇಳಿಕೆ ನೀಡಿದ್ದು ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದಾನೆ. ಸಧ್ಯ ಪೊಲೀಸರು ಆತನಿಂದ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
