2
ಮಂಗಳೂರು: ರಿಷಬ್ ಶೆಟ್ಟಿ ಅವರ ಹರಕೆಯ ಕೋಲದ ಸಂದರ್ಭದಲ್ಲಿ ನಡೆದ ದೈವ ನರ್ತಕನ ವರ್ತನೆಯನ್ನು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿ ಹಲವರು ವಿರೋಧ ಮಾಡಿದ್ದಾರೆ. ಈ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿರುವ ಆಡಳಿತ ಮಂಡಳಿ, ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ನಡೆದಾಗ ಕೋಲದ ಕೆಲ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಈ ವೇಳೆ ದೈವ ನರ್ತಕನ ವರ್ತನೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗಿತ್ತು. ಈ ಕುರಿತು ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಸಮಿತಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.
