Home » Bengaluru: ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ: ಅರಣ್ಯ ಸಚಿವ ಈಶ್ವರ್ ಖಂಡ್ರೆ

Bengaluru: ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ: ಅರಣ್ಯ ಸಚಿವ ಈಶ್ವರ್ ಖಂಡ್ರೆ

by ಕಾವ್ಯ ವಾಣಿ
0 comments

Bengaluru: ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ಹಿನ್ನಲೆಯಲ್ಲಿ ಅಕ್ರಮವಾಗಿ ಮರ ಕಡಿದರೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

You may also like