Home » Santosh Lad: ಜನರಿಗೆ ಟೀ, ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ – ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ!!

Santosh Lad: ಜನರಿಗೆ ಟೀ, ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ – ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ!!

0 comments

Santosh Lad: ಬಿಜೆಪಿಯನ್ನು ಟೀಕಿಸುವ ಬರದಲ್ಲಿ ಸಚಿವ ಸಂತೋಷ್ ಲಾಡ್ ಅವರು ಜನರಿಗೆ ಟೀ ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಮಂಡ್ಯದಲ್ಲಿ ಅಂಬೇಡ್ಕರ್ ಭವನದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಂತೋಷ್‌ ಲಾಡ್‌ ಭಾಗವಹಿಸಿದ್ದರು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಕಳಕಳಿ ಭದ್ರತಾ ಮಂಡಳಿ, ಮಂಡ್ಯ ಜಿಲ್ಲಾಡಳಿತದಿಂದ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಕಾಫಿ, ಟೀ ಯಾಕೆ ಕುಡಿಸುತ್ತೀರಾ ಉಚ್ಚೆ ಕುಡಿಸಿ ಎಂದು ಕಿಡಿಕಾರಿದ್ದಾರೆ.

ಅಂದಹಾಗೆ ತಾಲಿಬಾನ್ ಸಚಿವ ಭಾರತದಲ್ಲಿ ಸುದ್ದಿಗೋಷ್ಠಿ ನಡೆಸುವಾಗ ಹೆಣ್ಣು ಮಕ್ಕಳು ಇರಬಾರದು ಅಂತಾನೆ. ಅದನ್ನ ಕೇಂದ್ರ ಸರ್ಕಾರ ಒಪ್ಪುತ್ತದೆ. ಸಿಂಧೂರ್, ಹೆಣ್ಣುಮಕ್ಕಳ ಗೌರವ ಅಂದವರು ಎಲ್ಲಿ ಹೋದರು? ನಿಮ್ಮ ಅಕ್ಕತಂಗಿಯರು ಪ್ರೆಸ್‌ಮೀಟ್‌ಗೆ ಬರಬಾರದು ಎಂದರಲ್ಲ ಆಗ ದೇಶಕ್ಕೆ ಅವಮಾನ ಆಗಲಿಲ್ವಾ? ಹತ್ತು ವರ್ಷದಲ್ಲಿ ಯಾವ ಹಿಂದೂಗಳನ್ನು ಉದ್ದಾರ ಮಾಡಿದ್ದೀರಿ? ಸಗಣಿ, ಉಚ್ಚೆ ಅನ್ನೋದನ್ನ ಬಿಟ್ಟು ಇನ್ನೇನು ಮಾತನಾಡಿದ್ದೀರ? ಕಾಫಿ, ಟೀ ಯಾಕೆ ಕುಡಿಸುತ್ತೀರಾ ಉಚ್ಚೆ ಕುಡಿಸಿ ಎಂದು ಕಿಡಿಕಾರಿದ್ದಾರೆ.

You may also like