1
ಸವಣೂರು : ಜೀರ್ಣೋದ್ಧಾರ ಗೊಳ್ಳುತ್ತಿರುವ ನಮ್ಮ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಭೇಟಿ ನೀಡಿ
ಕಾಮಗಾರಿಗಳ ವೀಕ್ಷಣೆ ಮಾಡಿದರು.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಇನ್ನಷ್ಟು ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
ಅಲ್ಲದೇ ಪ್ರದೇಶ ಅಭಿವೃದ್ಧಿ ಯೋಜನೆಯಿಂದ ದೇವಾಸ್ಥಾನದ ಅಂಗಣಕ್ಕೆ ಇಂಟರ್ ಲಾಕ್ ಅಳವಡಿಕೆಗೆ ಅನುದಾನ
ಹಾಗೂ ಈಗಾಗಲೇ ಬೇಡಿಕೆ ಸಲ್ಲಿಸಿರುವ ತಡೆಗೋಡೆಗೆ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಸಾದ್ ರೈ ಸೊರಕೆ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ,ಗ್ರಾ.ಪಂ.ಅಧ್ಯಕ್ಷರು,ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು ಮೊದಲಾದವರಿದ್ದರು.
