9
School Holiday: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ನಾಳೆ ಜಿಲ್ಲೆಯಲ್ಲಿ (ಜೂ.4) ರೆಡ್ ಅಲರ್ಟ್ ಜಾರಿಗೊಳಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧೀಕಾರಿ ಡಾ.ಲಕ್ಷ್ಮೀಪ್ರಿಯಾ ಅವರು ಹೊರಡಿಸಿರುವ ಆದೇಶದ ಪ್ರಕಾರ, ನಾಲ್ಕು ತಾಲ್ಲೂಕುಗಳಲ್ಲಿ ನಾಳೆ (ಜು.4) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೊಯಿಡಾ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
