School Holiday : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ(School Holiday) ಘೋಷಿಸಿ ಆದೇಶ ಹೊರಡಿಸಲಾಗಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಬೆಂಗಳೂರಿನ ಕೆಲವೆಡೆಯಂತೂ ನೀರೋ ನೀರು. ಮನೆಯೊಳಗೆ, ಅಪಾರ್ಟ್ ಮೆಂಟ್ ಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ. ಅಲ್ಲದೇ ವಿವಿಧ ಏರಿಯಾಗಳಲ್ಲಿ ಮರಗಳು ಸಹ ಮುರಿದುಬಿದ್ದು, ಮಳೆ ನಗರದ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ.
ಅಲ್ಲದೆ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ (Bengaluru) ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹವಾಮಾನ ಇಲಾಖೆ ನೀಡಿದ ಭಾರೀ ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಅಂದರೆ ಅಕ್ಟೋಬರ್ (20) ರಂದು ರಜೆ ಘೋಷಿಸಲಾಗಿದೆ.
