School Holiday: ರಾಜ್ಯದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಅವಾಂತರವೇ ಹೆಚ್ಚಿದೆ. ಭಾರೀ ಮಳೆಯಿಂದ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಈ ಭಾರೀ ಮಳೆ ಮುಂದುವರಿಯಲಿದೆ ಎಂಬ ಮುನ್ಸೂಚನೆಯನ್ನು ನೀಡಿದೆ.
ಜಿಲ್ಲೆಯ 6 ತಾಲೂಕಿನಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶ ನೀಡಿದ್ದಾರೆ.
ಧಾರವಾಡದಲ್ಲೂ ಮಳೆ ಹೆಚ್ಚಾಗಿದ್ದು, ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಮಾಡಿದ್ದಾರೆ.
ಉತ್ತರಕನ್ನಡ, ಉಡುಪಿ, ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದರ ಜೊತೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
Shivamogga: ಮದುವೆ ಆಗು ಎಂದು ಹಿಂದೆ ಬಿದ್ದದ್ದಕ್ಕೆ ಪ್ರಿಯತಮೆಯನ್ನೇ ಭೀಕರವಾಗಿ ಕೊಂದ ಪಾಪಿ !!
