Home » ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ

ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ

by Praveen Chennavara
0 comments

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ.ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.
ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

You may also like

Leave a Comment