Home » ಎಸ್‌.ಡಿ.ಎಂ ಕಾಲೇಜು: ಕರ್ನಾಟಕ ತಂಡ ಪ್ರತಿನಿಧಿಸಿದ 6 ವಿದ್ಯಾರ್ಥಿಗಳು

ಎಸ್‌.ಡಿ.ಎಂ ಕಾಲೇಜು: ಕರ್ನಾಟಕ ತಂಡ ಪ್ರತಿನಿಧಿಸಿದ 6 ವಿದ್ಯಾರ್ಥಿಗಳು

0 comments

ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ನಗರದಲ್ಲಿನ ಲಿಂಗಂಪಲ್ಲಿಯಲ್ಲಿ 4 ದಿನಗಳ ಕಾಲ ನಡೆದ 43ನೇ ಪುರುಷರ ಮತ್ತು ಮಹಿಳೆಯರ ಸೀನಿಯರ್ ನ್ಯಾಷನಲ್ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ 6 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಕರ್ನಾಟಕ ತಂಡವನ್ನು ಪ್ರತಿನಿಧಿಸಿದ 43ನೇ ಸೀನಿಯರ್ ನ್ಯಾಷನಲ್ ನೆಟ್‌ಬಾಲ್ ತಂಡದಲ್ಲಿ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ದ್ವಿತೀಯ ಎಂ.ಎಸ್.ಡಬ್ಲ್ಯು

ವಿಭಾಗದ ವಿದ್ಯಾರ್ಥಿಗಳಾದ ಚಿಂತನ್ ಬಿ ಸಿ ಮತ್ತು ಪುನೀತ್ , ಪದವಿ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿಭಾಗದ ಪ್ರವೀಣ್ ಹಾಗು ಮಹಿಳೆಯರ ತಂಡದಲ್ಲಿ ಸ್ನಾತಕೋತ್ತರ ಕೇಂದ್ರದ ಎಂ.ಎಸ್.ಡಬ್ಲ್ಯು ವಿಭಾಗದ ರಶ್ಮಿ ಎಸ್, ಪದವಿ ಕಾಲೇಜಿನ ಬಿ.ಕಾಂ ವಿಭಾಗದ ಪಲ್ಲವಿ ಮತ್ತು ಸುರಕ್ಷಾ ಆಚಾರ್ಯ ಆಯ್ಕೆಗೊಂಡು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಉಜಿರೆಯ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ. ಆಯ್ಕೆಗೊಂಡು ಕರ್ನಾಟಕ ತಂಡದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ., ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

You may also like