Home » PUC Result: ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್‌ ಎರಡನೇ ವಾರದಲ್ಲಿ?

PUC Result: ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್‌ ಎರಡನೇ ವಾರದಲ್ಲಿ?

by Mallika
1 comment
Puc Result

PUC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಪರೀಕ್ಷೆಯು ಮಾರ್ಚ್‌ 1 ರಿಂದ 22 ರವರೆಗೆ ನಡೆದಿತ್ತು. ಇದೀಗ ದ್ವಿತೀಯ ಪಿಯುಸಿ ಪರೀಕ್ಷೆಯ-1 ರ ಫಲಿತಾಂಶ ಎಪ್ರಿಲ್‌ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಎಪ್ರಿಲ್‌ 10 ರ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟಸ ಸಾಧ್ಯತೆ ಇದೆ ಎನ್ನಲಾಗಿದೆ.

ವರದಿಯ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಘಟಕ್ಕೆ ತಲುಪಿದ್ದು, ಮೌಲ್ಯಮಾಪನ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯ ಕೂಡಾ ನಡೆಯಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಎಪ್ರಿಲ್‌ ಎರಡನೇ ವಾರ ಫಲಿತಾಂಶ ಪ್ರಕಟಿಸಲು ಮಂಡಳಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

5,8,9 ತರಗತಿಯ ಮಕ್ಕಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಕೂಡಾ ಕೊನೇ ಹಂತದಲ್ಲಿದ್ದು, ಇದು ಕೂಡ ಎ.8 ರಿಂದ 10 ರೊಳಗೆ ಪ್ರಕಟಿಸಲು ಮಂಡಳಿ ನಿರ್ಧಾರ ಮಾಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ವಾಹನಗಳನ್ನು ಸಂಪೂರ್ಣ ಬ್ಯಾನ್ ಮಾಡಲು ಮುಂದಾದ ಕೇಂದ್ರ ಸರ್ಕಾರ !! ಹೊಸ ಪ್ಲಾನ್ ಘೋಷಿಸಿದ ನಿತಿನ್ ಗಡ್ಕರಿ !!

You may also like

Leave a Comment