Home » ಸೀತಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಸೀತಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

0 comments

ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ಸೀತಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂದಾರ್ತಿ ಸಮೀಪ ನಂಚಾರಿನಲ್ಲಿ ಭಾನುವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ನಿವಾಸಿ, ಮಧುವನ ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ನರ್ಸಿಂಗ್ ಅಭ್ಯಾಸಿಸುತ್ತಿದ್ದ ವಿದ್ಯಾರ್ಥಿ ಜಿಬಿನ್ ಸಾಮ್ (20) ಎಂದು ಗುರುತಿಸಲಾಗಿದೆ.

ಭಾನುವಾರ ಅಮುಲ್ ಬಿಜಿ ಎಂಬವರ ಮನೆಗೆ ಜಿಬಿನ್ ಸಾಮ್ ಸೇರಿ ಮೂವರು ಸ್ನೇಹಿತರು ಬಂದಿದ್ದರು. ಸ್ನೇಹಿತರ ಜೊತೆಯಲ್ಲಿ ನಂಚಾರು ಸಮೀಪದ ಸೀತಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಜಿಬಿನ್ ಸಾಮ್ ನೀರಿನಲ್ಲಿ ಮುಳುಗಿದ್ದಾರೆ. ಆತನನ್ನು ಸ್ಥಳೀಯರು ತಕ್ಷಣ ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದಿದ್ದರು. ಆದರೆ ಅದಾಗಲೇ ಜಿಬಿನ್ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

ಕೋಟ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

Leave a Comment