Home » Shamanur Shivashankarappa Death: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Shamanur Shivashankarappa Death: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

0 comments

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ (94) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಶಾಮನೂರು ಶಿವಶಂಕರಪ್ಪ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ಕೆಪಿಸಿ ಖಜಾಂಚಿಯಾಗಿ ಅನೇಕ ವರ್ಷ ಕೆಲಸ ನಿರ್ವಹಿಸಿದ್ದರು. ಆರು ಬಾರಿ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಸಚಿವರಾಗಿ ಕೆಲಸ ಮಾಡಿದ್ದಾರೆ.

You may also like