Home » Mandya: ಮಂಡ್ಯದ ಜನ ನರಸತ್ತವರು ಅಂತ ಕುಮಾರಸ್ವಾಮಿ ಇಲ್ಲಿಗೆ ಬಂದಿದ್ದಾರೆ- ಶಿವರಾಮೇಗೌಡ ವಾಗ್ದಾಳಿ

Mandya: ಮಂಡ್ಯದ ಜನ ನರಸತ್ತವರು ಅಂತ ಕುಮಾರಸ್ವಾಮಿ ಇಲ್ಲಿಗೆ ಬಂದಿದ್ದಾರೆ- ಶಿವರಾಮೇಗೌಡ ವಾಗ್ದಾಳಿ

0 comments

Mandya: ಮಾಜಿ ಸಂಸದ ಎಲ್‌.ಆರ್‌. ಶಿವರಾಮೇಗೌಡ ಅವರು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ನಲಗೆ ಹರಿಬಿಟ್ಟಿದ್ದಾರೆ. ಮಂಡ್ಯದವರನ್ನು ನರಸತ್ತವರು, ಗಂಡಸರಾಗಿ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಜಿಲಲೆಯ ರಾಜಕೀಯ ಮುಖಂಡರಿಗೆ ಶಿವರಾಮೇಗೌಡ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರದಿಂದ ಕುಮಾರಸ್ವಾಮಿಯನ್ನು ಓಡಿಸಿದ್ದು, ಆದರೆ ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಎಚ್ಚೆತ್ತುಕೊಳ್ಳಬೇಕು. ನಿಮ್ಮಲ್ಲೂ ಗಂಡಸರು ಇದ್ದಾರೆ. ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ. ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟ ಕೊಳ್ಳಬೇಡಿ ಎಂದು ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರ ಮುಂದೆ ಹೇಳಿದ್ದಾರೆ.

You may also like

Leave a Comment