Milk Price : ರಾಜ್ಯ ಸರ್ಕಾರ ದಿನೇ ದಿನೇ ರಾಜ್ಯದ ಜನತೆಗೆ ಬೆಲೆ ಏರಿಕೆಯ ಹೊರೆಯನ್ನು ಹೊರಿಸುತ್ತಿದೆ. ಕೆಲವೇ ದಿನಗಳ ಹಿಂದಷ್ಟೇ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ ಎಂಬ ಸುದ್ದಿ ಬಂದಿದೆ.
ಹೌದು, ಕಳೆದ ತಿಂಗಳು ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿತ್ತು. ಇದೀಗ ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ.ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ.
ಅಂದಹಾಗೆ ಇದೇ ತಿಂಗಳ 21ಕ್ಕೆ ಈಗಿನ ಕೆಎಂಎಫ್ (KMF) ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗಲಿದೆ. ಅದರ ಬೆನ್ನಲ್ಲೇ ಇದೇ 25ಕ್ಕೆ ಹೊಸ ನಿರ್ದೇಶಕರ ಆಯ್ಕೆ ಆಗಲಿದೆ. ಹೊಸ ಆಡಳಿತ ಮಂಡಳಿ ರಚನೆಯಾದ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರದ ಮುಂದೆ ಮತ್ತೆ ದರ ಹೆಚ್ಚಳ ಪ್ರಸ್ತಾವನೆ ಸಲ್ಲಿಸಲು ಚರ್ಚೆ ನಡೆಯುತ್ತಿದೆ.
ಈ ಕುರಿತು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಸುಳಿವು ನೀಡಿದ್ದಾರೆ.
