Home » PM Modi : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆತ ಪ್ರಕರಣ – ಕೊನೆಗೂ ಮೌನ ಮುರಿದ ಪ್ರಧಾನಿ ಹೇಳಿದ್ದೇನು?

PM Modi : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆತ ಪ್ರಕರಣ – ಕೊನೆಗೂ ಮೌನ ಮುರಿದ ಪ್ರಧಾನಿ ಹೇಳಿದ್ದೇನು?

0 comments

PM Modi : ಕೋರ್ಟ್ ಕಲಾಪದ ವೇಳೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಬಿರ್.ಆರ್. ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಆಘಾತಕಾರಿ ಘಟನೆ ನಿನ್ನೆ ನಡೆದಿದ್ದು, ನಂತರ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ಅಭ್ಯಾಸದಿಂದ ಬಾರ್ ಕೌನ್ಸಿಲ್ ಆಫ್ ಇಂಡಿಯಾ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ಮೋದಿ ಮೌನ ಮುರಿದಿದ್ದಾರೆ.

ಎಕ್ಸ್‌’ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿ ಈ ಘಟನೆಯನ್ನು “ಖಂಡನೀಯ ಕೃತ್ಯ” ಎಂದು ಕರೆದರು ಮತ್ತು ಈ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ ಎಂದು ಹೇಳಿದ್ದಾರೆ.

ಅಲ್ಲದೆ ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಜೀ ಅವರೊಂದಿಗೆ ಮಾತನಾಡಿದ್ದೇನೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಳವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

You may also like