Mangaluru Prisoners: ಆಹಾರದಲ್ಲಿ ವ್ಯತ್ಯಾಸ ಉಂಟಾಗಿ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೈದಿಗಳ ಪೈಕಿ 37 ಮಂದಿ ಸಂಪೂರ್ಣವಾಗಿ ಚೇತರಿಸಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್‌ನಿಂದ ಬಿಡುಗಡೆಗೊಳಿಸಿ ಮತ್ತೆ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ.
11 ಮಂದಿ ಆಸ್ಪತ್ರೆಯ ಜೈಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಐಸಿಯು ನಲ್ಲಿ ಇದ್ದಾರೆ. ಎಲ್ಲರೂ ಗುಣಮುಖರಾಗುತ್ತಿರುವುದಾಗಿಯೂ, ಆರೋಗ್ಯ ಸ್ಥಿರವಾಗಿದೆ ಎಂದು ಮಾಧ್ಯಮವೊಂದು ಪ್ರಕಟ ಮಾಡಿದೆ.
ಮಾ.5 ರಂದು ವಿಷಾಹಾರ ಸೇವನೆಯಿಂದ ಕೈದಿಗಳು ಅಸ್ವಸ್ಥಗೊಂಡಾಗ, ಈ ಸಮಯದಲ್ಲಿ ಜೈಲಿನಲ್ಲಿದ್ದ ಇತರ ಕೈದಿಗಳು ಗುಂಪು ಸೇರಿ, ಜೋರಾಗಿ ಕೂಗಾಡಿ ಅವಾಚ್ಯ ಶಬ್ದಗಳಿಂದ ಬೈಯುತ್ತಾ ವಸ್ತುಗಳನ್ನು ಎಸೆದು ಹಾನಿಗೊಳಿಸಿದ್ದು, ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
ಜೈಲಿನ ಅಧಿಕಾರಿಗಳು, ಸಿಬ್ಬಂದಿಗಳು ಸಮಾಧಾನ ಮಾಡಿಸಿದರೂ, ಅವಾಚ್ಯ ಶಬ್ದ ಬಳಕೆ, ಕೈಯಿಂದ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಮಾಡಿರುವ ಕುರಿತು ವರದಿಯಾಗಿದೆ. ಈ ಹಲ್ಲೆ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿರುವ ಕುರಿತು ಜೈಲು ಅಧೀಕ್ಷಕರು ದೂರಿನಲ್ಲಿ ತಿಳಿಸಿರುವ ಕುರಿತು ವರದಿಯಾಗಿದೆ.
