Home News Siddaramaiah: ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಆದೇಶ

Siddaramaiah: ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಆದೇಶ

Siddaramaiah: ಡಿಜಿಪಿ ರಾಮಚಂದ್ರ ರಾವ್ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿವಾದಾತ್ಮಕ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಿ ಎಂ ಖಡಕ್ ನಿರ್ಧಾರ ಕೈಗೊಂಡಿದ್ದಾರೆ.

ಈ ಅವಮಾನಕರ ಪ್ರಕರಣಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿಪಿ ರಾಮಚಂದ್ರ ರಾವ್ ತಕ್ಷಣ ಅಮಾನತು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅವರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಪ್ರಕರಣದ ಗಂಭೀರತೆಯನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಆಡಳಿತದ ಮೇಲಿನ ಸಾರ್ವಜನಿಕ ನಂಬಿಕೆ ಕಾಪಾಡುವ ದೃಷ್ಟಿಯಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿವಾದ ಉಂಟಾದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅವರು 10 ದಿನಗಳ ರಜೆಗೆ ತೆರಳಿದ್ದಾರೆ. ಈ ಅವಧಿಯಲ್ಲಿ ಅವರು ಕಚೇರಿಗೆ ಗೈರಾಗುವ ಬಗ್ಗೆ ತಮ್ಮ ಸಿಬ್ಬಂದಿಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದಾರೆ. ಸದ್ಯ ರಾಮಚಂದ್ರ ರಾವ್ ಯಾವುದೇ ಕರೆಗಳನ್ನು ಸ್ವೀಕರಿಸದೇ ದೂರ ಉಳಿದಿದ್ದಾರೆ ಎಂಬುದೂ ತಿಳಿದು ಬಂದಿದೆ.